Karnataka News

*ತೆರೆದ ಬಾವಿಗೆ ಬಿದ್ದು 3 ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಮಗು ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಇಲ್ಲಿನ ಮುದ್ದೆಬಿಹಾಳ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ. ಹರ್ಷಿತ್ (3) ಮೃತ ಬಾಲಕ. ಶುಕ್ರವಾರ ಸಂಜೆಯಿಂದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಪೋಷಕರು ಎಷ್ಟೇ ಹುಡುಕಾಟ ನಡೆಸಿದರೂ ಬಾಲಕನ ಪತ್ತೆ ಇರಲಿಲ್ಲ.

Home add -Advt

ಇಂದು ಅನುಮಾನಗೊಂದು ಮನೆಯವರು ಮನೆ ಬಳಿಯ ತೆರೆದ ಬಾವಿ ನೋಡಿದಾಗ ಅಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಆಟವಾಡಲು ಹೋಗಿ ಬಾಲಕ ತೆರೆದ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮುದ್ದೆಬಿಹಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button