Latest

*ಇಂದು ಬಿಡುಗಡೆಯಾಗದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ; ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ. ಇಂದು ಬಿಡುಗಡೆಯಾಗಬೇಕಿದ್ದ ಅಭ್ಯರ್ಥಿಗಳ ಪಟ್ಟಿ ಕಾರಣಾಂತರಗಳಿಂದ ಮುಂದೂಡಿಕೆಯಾಗಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ. ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇನ್ನು 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹಾಗಾಗಿ ಅಭ್ಯರ್ಥಿಗಳ ಪಟ್ಟಿ ಇನ್ನು 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದರು.

Home add -Advt

Related Articles

Back to top button