LatestUncategorized

*ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಉಸ್ತುವಾರಿಗಳಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗದ ಕಾಂಗ್ರೆಸ್ ಮುಖಂಡರು ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ್ದಾರೆ.

Home add -Advt

ವರುಣಾ ಹಾಗೂ ಚಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು ನಡೆಯುತ್ತವೆ. ಘರ್ಷಣೆ, ಗಲಭೆಗಳು ಹೆಚ್ಚಾಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಹಾಗೂ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಲ್ಲದೇ ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

https://pragati.taskdun.com/karnatakarainupdate-3/
https://pragati.taskdun.com/pm-modimaha-samvadakarnataka-bjp-workers/

Related Articles

Back to top button