ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಪ್ರತಿ ದಿನ ಚುನಾವಣಾಧಿಕಾರಿಗಳು ಕೋಟ್ಯಂತರ ರೂಪಾಯಿ ಅಕ್ರಮ ಹಣವನ್ನು ವಶಕ್ಕೆ ಪಡೆಯುತ್ತಿದ್ದಾರೆ.
ದಾಖಲೆ ಇಲ್ಲದೇ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹಿನ್ನಾಳಿಯ ನ್ಯಾಮತಿ ತಾಲುಕಿನ ಜೀನಹಳ್ಳಿಯ ಚೆಕ್ ಪೋಸ್ಟ್ ನಲ್ಲಿ ಬೈಕ್ ಸವಾರನನ್ನು ತಡೆದು ಪರಿಶೀಲಿಸಿದಾಗ ಬೈಕ್ ಸವಾರ ತನ್ನ ಸೊಂಟಕ್ಕೆ ಕಂತೆ ಕಂತೆ ನೋಟುಗಳನ್ನು ಕಟ್ಟಿಕೊಂಡಿರುವುದು ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್ ಎಂಬುವವರು ಹಣ ಸಾಗಿಸುತ್ತಿದ್ದು, ಇಬ್ಬರನ್ನು ವಶಕ್ಕೆ ಪಡೆದು 7.5 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ