ಪ್ರಗತಿವಾಹಿನಿ ಸುದ್ದಿ; ಮೈಸೂರು: 2023ರ ವಿಧಾನಸಭಾ ಜೆಡಿಎಸ್ ಇಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ ಅಭ್ಯರ್ಥಿಗಳಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆಯಾಗಿದೆ.
ಇಂದಿನಿಂದ ಕೋಲಾರದ ಮುಳಬಾಗಿಲಿನಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಪುನರಾರಂಭವಾಗಿದ್ದು, ಇಂದೇ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ಹೇಳಲಾಗಿತ್ತು. ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ನಿಂದ ಮೊದಲ ಹಂತದ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಮ್ಮ ಜೋತಿಷಿ ರೇವಣ್ಣ ತಕರಾರು ತೆಗೆದಿದ್ದಾರೆ ಎಂದು ಹೇಳಿದರು.
ಹೆಚ್.ಡಿ.ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಅವರು ಇಂದು ಸಮಯ ಪ್ರಸಕ್ತವಾಗಿಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸೂಕ್ತವಲ್ಲ ಎಂದು ತಕರಾರು ತೆಗೆದಿದ್ದಾರೆ. ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲ್ಲ. ಸಮಯ ನೋಡಿಕೊಂಡು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ವೋಟರ್ ಐಡಿ ಅಕ್ರಮ; 6,69,652 ಮತದಾರರ ಹೆಸರು ಡಿಲಿಟ್
https://pragati.taskdun.com/h-d-kumaraswamyattackbjppancharatna-ratha-yatre/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ