Latest

JDS ಅಭ್ಯರ್ಥಿಗಳ ಪಟ್ಟಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: 2023ರ ವಿಧಾನಸಭಾ ಚುನಾವಣೆಗೆ ದಳಪತಿಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಪಂಚರತ್ನ ಯಾತ್ರೆ ಆರಂಭಕ್ಕೂ ಮುನ್ನವೇ ಮೈಸೂರು ಭಾಗದ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡಿದ್ದಾರೆ.

ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಮೂಲಕ ಮೈಸೂರು ಭಾಗದಲ್ಲಿ ಜೆಡಿಎಸ್ ತನ್ನ ಕೋಟೆಯನ್ನು ಇನ್ನಷ್ಟು ಭದ್ರ ಪಡಿಸಿಕೊಳ್ಳಲು ಮುಂದಾಗಿದೆ. ಪಕ್ಷ ಜವಾಬ್ದಾರಿ ನೀಡುತ್ತಿದ್ದಂತೆ ಶಾಸಕ ಜಿ.ಟಿ.ದೇವೇಗೌಡ ಮೈಸೂರು ಭಾಗದ ಕ್ಷೇತ್ರವಾರು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

Home add -Advt

ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡ, ಮೈಸೂರು ಭಾಗದ ಪಟ್ಟಿ ಘೋಷಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ಗೌಡ ಅವರಿಗೆ ಟಿಕೆಟ್ ಘೋಷಣೆಯಾಗಿದೆ ಎಂದರು.

ಕೆ.ಆರ್.ನಗರ ಕ್ಷೇತ್ರದಿಂದ ಶಾಸಕ ಸಾ.ರಾ.ಮಹೇಶ್, ಪಿರಿಯಾಪಟ್ಟಣದಿಂದ ಕೆ.ಮಹದೇವ್, ಟಿ.ನರಸಿಪುರದಿಂದ ಅಶ್ವಿನ್, ಹೆಚ್.ಡಿ.ಕೋಟೆ ಕ್ಷೇತ್ರದಿಂದ ಜಯಪ್ರಕಾಶ್ ಸ್ಪರ್ಧೆ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ತಿಳಿಸಿದರು.

ಬೆಳಗಾವಿ: ಹಳ್ಳಕ್ಕೆ ಬಿದ್ದ ಕಾರು; ದಂಪತಿ ರಕ್ಷಣೆ

https://pragati.taskdun.com/latest/belagavicar-washed-awayankalagicouple-resque/

Related Articles

Back to top button