Latest

*ಕಾಂಗ್ರೆಸ್ ಅಭ್ಯರ್ಥಿಗೆ JDS ಬೆಂಬಲ ಬಹುತೇಕ ಖಚಿತ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣಗೆ ಜೆಡಿಎಸ್ ಬೆಂಬಲ ಬಹುತೇಕ ಖಚಿತವಾಗಿದೆ. ಜೆಡಿಎಸ್ ನಂಜನಗೂಡಿನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶರಾಗಿದ್ದರು. ಇದರ ಬೆನ್ನಲ್ಲೇ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್ ಧ್ರುವನಾರಾಯಣ ಪುತ್ರ ದರ್ಶನ್ ಗೆ ಟಿಕೆಟ್ ಘೋಷಣೆ ಮಾಡಿತ್ತು. ಇಂದು ಧ್ರುವನಾರಾಯಣ ಪತ್ನಿ ವೀಣಾ ಕೂಡ ನಿಧನರಾಗಿದ್ದಾರೆ. ಹಾಗಾಗಿ ನಂಜನಗೂಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದೇ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಬೆಂಬಲಿಸಲು ತೀರ್ಮಾನಿಸಿದೆ.

ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ಪರ ಅನುಕಂಪದ ಮತ ಬೀಳುವುದು ಖಚಿತವಾಗುತ್ತಿದ್ದಂತೆ ಎಚ್ಚೆತ್ತ ಜೆಡಿಎಸ್ ಈ ನಿರ್ಧಾರಕ್ಕೆ ಮುಂದಾಗಿದ್ದು, ದರ್ಶನ್ ಗೆ ಬೆಂಬಲ ಘೋಷಿಸುವುದು ಬಹುತೇಕ ಖಚಿತವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ದಿ.ಆರ್.ಧ್ರುವನಾರಾಯಣ ಮಕ್ಕಳು ಇಂದು ಅನಾಥರಾಗಿದ್ದಾರೆ. ತಂದೆ ಕಳೆದುಕೊಂಡ ನೋವು ಇರುವಾಗಲೇ ತಾಯಿಯನ್ನೂ ಕಳೆದುಕೊಂಡಿದ್ದಾರೆ. ಇಂತಹ ದು:ಖದಲ್ಲಿರುವವರ ಎದುರು ಸ್ಪರ್ಧಿಸಲು ನಮಗೆ ಮನಸ್ಸು ಬರುತ್ತಿಲ್ಲ. ಹಾಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾ ಬೇಡ್ವಾ ಎಂಬ ಚರ್ಚೆ ನಡೆಸುತ್ತಿದ್ದೇವೆ. ಈ ಬಗ್ಗೆ ಶೀಘ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ತೀರ್ಮಾನಿಸ್ತಾರೆ ಎಂದು ಹೇಳಿದ್ದಾರೆ.

Home add -Advt
https://pragati.taskdun.com/vidhanasabha-electiony-s-v-dattacongressticketmiss/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button