*ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು*

ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿಧಾನಸಭಾ ಚುನಾವಣೆಯ ಪ್ರತಿಷ್ಠೆಯ ಕಣವಾಗಿದ್ದ ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹೀನಾಯ ಸೋಲುಂಟಾಗಿದೆ.

Home add -Advt

ಸಚಿವ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

https://pragati.taskdun.com/vidhanasabha-electionresultchamarajanagabellary/


Related Articles

Back to top button