ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭ ಚುನಾವಣೆ ಸಮೀಪಿಸುತ್ತಿದ್ದಂತೆ ಎಸ್ ಡಿ ಪಿ ಐ ಸಂಘಟನೆ ಮತ್ತೊಂದು ವಿವಾದ ಸೃಷ್ಟಿಸಿದೆ. ಎನ್ ಐಎ ಬಂಧನದಲ್ಲಿರುವ ಆರೋಪಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಎಸ್ ಡಿ ಪಿ ಐ ಪುತ್ತೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಎನ್ ಐ ಎ-ರಾಷ್ಟ್ರೀಯ ತನಿಖಾ ದಳ ಬಂಧನದಲ್ಲಿರುವ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ ಐಎಯಿಂದ ಬಂಧಿಸಲ್ಪಟ್ಟಿರುವ ಶಾಫಿಯನ್ನು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.
*ಜೈನ್ ಕಾಲೇಜಿನ 7 ವಿದ್ಯಾರ್ಥಿಗಳ ಬಂಧನ*
https://pragati.taskdun.com/jain-univercity7-studentsarrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ