Latest

*ಸಿದ್ದರಾಮಯ್ಯಗೆ ಶಕ್ತಿ ದೇವತೆ ನೀಡಿದ ಸಂದೇಶವೇನು? *

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದರಾಮಯ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ಶಕ್ತಿ ದೇವತೆಯ ಸಂದೇಶವಾದ ಬಗ್ಗೆ ವಿಡಿಯೋ ವೈರಲ್ ಆಗಿದೆ.

ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲೇಬೇಕು ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ಆದಿನಾಡು ಚಿಕ್ಕಮ್ಮ ದೇವಿ ಸಂದೇಶ ನೀಡಿದ್ದಾರೆ.

ಸಿದ್ದರಾಮಯ್ಯ ಬಾಹುಬಲ ಎರಡು ಕಡೆ ಚಾಚಲೇಬೇಕು ಎಂದು ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಶಕ್ತಿ ದೇವತೆ ಸಂದೇಶ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಕಳೆದ ಬಾರಿಯಂತೆಯೇ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆಯೇ? ಕೋಲಾರದ ಜೊತೆಗೆ ವರುಣಾದಿಂದಲೂ ಸ್ಪರ್ಧಿಸುತ್ತಾರಾ ಎಂಬ ಕುತೂಹಲ ಇಮ್ಮಡಿಗೊಂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಬಾದಾಮಿ ಕ್ಷೇತ್ರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

Home add -Advt

*ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿ; ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಹೇಳಿದ್ದೇನು?*

https://pragati.taskdun.com/h-nageshcongress-joinmulabagilu-mla/

 

Related Articles

Back to top button