Latest

*ಚುನಾವಣಾ ಅಖಾಡದಲ್ಲಿ ಕ್ಷಿಪ್ರ ಬೆಳವಣಿಗೆ; ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ ಜೆಡಿಎಸ್ ಅಭ್ಯರ್ಥಿ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಕ್ಷಿಪ್ರ ಬೆಳವಣಿಗೆಯೊಂದು ನಡೆದಿದ್ದು, ಚುನಾವಣೆಗೆ ಇನೇನು 10 ದಿನಗಳು ಮಾತ್ರ ಬಾಕಿಯಿರುವಾಗ ಜೆಡಿಎಸ್ ಅಭ್ಯರ್ಥಿಯೊಬ್ಬರು ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.

ವಿಜಯಪುರ ನಗರ ಕ್ಷೇತ್ರದಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಗೆಲುವು ಕಷ್ಟಕರವಾಗಲಿದೆ.

ಕಾಂಗ್ರೆಸ್ ಗೆ ಬೆಂಬಲ ಘೋಷಿಸಿರುವ ಬಗ್ಗೆ ಸ್ಪಷ್ಟಪಡಿಸಿರುವ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ, ವಿಜಯಪುರ ನಗರ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆ ಇಲ್ಲ. ಪ್ರಚಾರಕ್ಕಾಗಿ ಎರಡು ದಿನ ತೆರಳಿದಾಗ ನಮಗೆ ಯಾವುದೇ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಇದರಿಂದಾಗಿ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದೇನೆ ಎಂದು ಹೇಳಿದ್ದಾರೆ.

ಒಟ್ಟಾರೆ ವಿಜಯಪುರ ನಗರದಲ್ಲಿ ಕೊನೇ ಕ್ಷಣದಲ್ಲಿ ಜೆದಿಎಸ್ ಅಭ್ಯರ್ಥಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದು, ಚುನಾವಣಾ ಅಖಾಡ ಕುತೂಹಲಕ್ಕೆ ಕಾರಣವಾಗಿದೆ. 2018ರಲ್ಲಿ 6413 ಮತಗಳ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಯತ್ನಾಳ್ ಅವರಿಗೆ ಈಬಾರಿ ಗೆಲುವು ಇನ್ನಷ್ಟು ಕಠಿಣವಾಗಿದೆ ಎಂದು ಹೇಳಲಾಗುತ್ತಿದೆ.

Home add -Advt
https://pragati.taskdun.com/d-k-shivakumarreactionpm-modi/

Related Articles

Back to top button