Uncategorized

*ಪ್ರಚಾರಕ್ಕೆ ಹೋಗದಯೇ ಧಾರವಾಡದಲ್ಲಿ ಭರ್ಜರಿ ಗೆಲುವು ಸಾಧಿಸಿದ ವಿನಯ್ ಕುಲ್ಕರ್ಣಿ*

ಧಾರವಾಡ; ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲ್ಕರ್ಣಿ ಭಜರಿ ಗೆಲುವು ಸಾಧಿಸಿದ್ದಾರೆ.

ಒಂದೇ ಒಂದು ದಿನ ಧಾರವಾಡ ಕ್ಷೇತ್ರಕ್ಕೆ ಪ್ರಚಾರಕ್ಕೆ ತೆರಳಲು ಅವಕಾಶವಿಲ್ಲದಿದ್ದರೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲ್ಕರ್ಣಿ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಸೋಲನುಭವಿಸಿದ್ದಾರೆ.

ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪ ಹಿನ್ನೆಲೆಯಲ್ಲಿ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ವಿನಯ್ ಕುಲ್ಕರ್ಣಿಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿದ್ದರೂ ಧಾರವಾಡ ಕ್ಷೇತ್ರದಲ್ಲಿ ಪ್ರಚಾರಕ್ಕಾಗಿ ಹೋಗಲು ಸಾಧ್ಯವಾಗಿರಲಿಲ್ಲ. ಆದಾಗ್ಯೂ ಧಾರವಾಡದಲ್ಲಿ ವಿನಯ್ ಕುಲ್ಕರ್ಣಿ ಗೆಲುವು ಸಾಧಿಸಿದ್ದಾರೆ.

Home add -Advt

ವಿನಯ್ ಕುಲ್ಕರ್ಣಿ ಸುಮಾರು 70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button