Uncategorized

*ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭ; ಅಂಚೆ ಮತ ಎಣಿಕೆಯಲ್ಲಿ ಯಾರು ಮುನ್ನಡೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 224 ಕ್ಷೇತ್ರಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದೆ.

ಅಂಚೆ ಮತ ಎಣಿಕೆಯಲ್ಲಿ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಪಿಅಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುನ್ನಡೆ ಸಾಧಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದರೆ, ಚೆನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಮುನ್ನಡೆಯಲಿದ್ದಾರೆ. ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಮುನ್ನಡೆ ಸಾಧಿಸಿದ್ದಾರೆ.

ಗೋಕಾಕಲ್ಲಿ ರಮೇಶ ಜಾರಕಿಹೊಳಿ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್ ಗೆ ಆರಂಭಿಕ ಹಿನ್ನಡೆಯಾಗಿದೆ.

Home add -Advt
https://pragati.taskdun.com/in-whose-hands-is-the-helm-of-the-state-revealed-in-a-few-hours/

Related Articles

Back to top button