Kannada NewsKarnataka NewsLatest

*ಚುನಾವಣೆ ಹಿನ್ನೆಲೆ; ನಾಳೆ ವೇತನ ಸಹಿತ ರಜೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಳೆ ಬುಧವಾರ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿ ತಿಳಿಸಿದ್ದಾರೆ.

ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.

https://pragati.taskdun.com/d-k-shivakumarcylindervidhanasabha-election/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button