Latest

*ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ವೈ.ಎಸ್.ವಿ.ದತ್ತಾ; ಬೆಂಬಲಿಗರ ಸಭೆ ಕರೆದ ನಾಯಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟಿಕೆಟ್ ಸಿಗುವ ಭರವಸೆಯೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ ದತ್ತಾಗೆ ಆಘಾತವಾಗಿದೆ. ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು, ಇದರಿಂದ ಸಮಾಧಾನಗೊಂಡಿರುವ ಅವರು ಕೈ ನಾಯಕರ ವಿರುದ್ಧ ಸಿಡಿದೆದ್ದಿದ್ದಾರೆ.

ಕಾಂಗ್ರೆಸ್ ಈಗ ಆನಂದ್ ಅವರಿಗೆ ಮಣೆ ಹಾಕಿದ್ದು, ಬೇಸರಗೊಂಡಿರುವ ವೈ.ಎಸ್.ವಿ ದತ್ತಾ, ಬೆಂಬಲಿಗರು, ಅಭಿಮನಿಗಳಿಗೆ ಪತ್ರ ಬರೆದಿದ್ದು, ಮುಂದಿನ ರಾಜಕೀಯ ನಡೆ ಚರ್ಚಿಸಲು ಬೆಂಬಲಿಗರ ಸಭೆ ಕರೆದಿದ್ದಾರೆ.

ನನ್ನ ಹಾಗೂ ಬೆಂಬಲಿಗರ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ. ಹಾಗಾಗಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆದಿದ್ದೇನೆ ಹಣ, ಜಾತಿ ಇಲ್ಲದ ನನ್ನನ್ನು ದತ್ತಣ್ಣ ನಮ್ಮಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿರುವ ಬೆಂಬಲಿಗರು ಬಂದು ನಿರ್ಧಾರ ಕೈಗೊಳ್ಳಲು ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಈ ಹಿಂದೆ ವೈ.ಎಸ್.ವಿ.ದತ್ತಾ ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ದತ್ತಾ ಅವರಿಗೆ ಟಿಕೆಟ್ ನೀಓಡಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನಿಸಿದ್ದರು. ಆದಾಗ್ಯೂ ಸಾಧ್ಯವಾಗಿಲ್ಲ. ಕೊನೇ ಗಳಿಗೆಯಲ್ಲಿ ಕಡೂರು ಕ್ಷೇತ್ರದಲ್ಲಿ ಆನಂದ್ ಕೆ ಎಸ್ ಅವರು ಟಿಕೆಟ್ ಪಡೆದುಕೊಂಡಿದ್ದಾರೆ. ಇದು ಸಹಜವಾಗಿಯೇ ವೈ.ಎಸ್.ವಿ. ದತ್ತಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

Home add -Advt
https://pragati.taskdun.com/rebellion-is-hot-for-congress-in-sirsi-too/

https://pragati.taskdun.com/bjp-candidatelistappril-9threleasecm-basavra-bommai/

Related Articles

Back to top button