Kannada NewsKarnataka NewsLatestPolitics

*ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ*

ಪ್ರಗತಿವಾಹಿನಿ ಸುದ್ದಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ನಿರ್ಧರಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಸಚಿವರಿಂದ ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭೆಯ ಕಲಾಪದ ವೇಳೆಯೂ ವಿಪಕ್ಷ ನಾಯಕ ಆರ್.ಅಶೋಕ್ ಈ ವಿಚಾರ ಪ್ರಸ್ತಾಪಿಸಿದ್ದು, ಸಚಿವ ತಿಮ್ಮಾಪುರ ರಾಜಿನಾಮೆಗೆ ಒತ್ತಾಯಿಸಿ ಸದನದಲ್ಲಿಯೇ ವಿಪಕ್ಷಗಳು ಧರಣಿ ನಡೆಸಿದವು. ಸದನದ ಕಲಾಪ ಮುಂದೂಡಿಕೆಯಾದರೂ ಹೊರ ಬಾರದ ವಿಪಕ್ಷ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಹೋರಾಟ ನಡೆಸಲು ಮುಂದಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button