Kannada NewsLatestNational

*ರಾಜಭವನ ಆವರಣಕ್ಕೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ*

ಆರೋಪಿ ಅರೆಸ್ಟ್


ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳುನಾಡಿನ ರಾಜಭವನ ಆವರನಕ್ಕೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.

Home add -Advt

ಚೆನ್ನೈನಲ್ಲಿ ರಾಜಭವನದ ಆವರಣದಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತನನ್ನು ಕರುಕ್ಕ ವಿನೋದ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮೊದಲಿನಿಂದ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿಗೆ ಈ ಘಟನೆ ಮತ್ತಷ್ಟು ವಾಕ್ಸಮರಕ್ಕೆ ಕಾರಣವಾಗಿದೆ. ರಾಜಭವನದ ಆವರಣದಲ್ಲಿಯೇ ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು, ಇದು ತಮಿಳುನಾಡಿನ ಕಾನೂನು ಸುವ್ಯವಸ್ಥೆಯನ್ನು ನಿಜವಾಗಿ ಪ್ರತಿಬಿಂಬಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.


Related Articles

Back to top button