Kannada NewsKarnataka NewsLatest

*ವಿಧಾನಸೌಧದ ಬಳಿ ಡ್ರೋಣ್ ಹಾರಿಸಲು ಯತ್ನ; ಇಬ್ಬರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದ ಸುತ್ತಮುತ್ತ ಡ್ರೋಣ್ ಹಾರಿಸಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸೌಧದ ಬಳಿ ಡ್ರೋಣ್ ಹಾರಿಸಲು ಇಬ್ಬರು ಯತ್ನಿಸಿದ್ದರು. ಈ ವೇಳೆ ವಿಧಾನಸೌಧ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆಗೆಂದು ಬಂದಿದ್ದ ಇಬ್ಬರೂ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button