Kannada NewsKarnataka NewsLatest

*ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಕ್ತಿ ಕೇಂದ್ರ, ಅತಿ ಹೆಚ್ಚು ಭದ್ರತೆ ಇರುವ ಸ್ಥಳ ವಿಧಾನಸೌಧದಲ್ಲಿಯೇ ಚಿನ್ನಾಭರಣ ಕಳ್ಳತನಾಗಿರುವ ಘಟನೆ ಬೆಳಕಿಗೆ ಬಂದಿದೆ.

ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಹಣ ಇದ್ದ ಬ್ಯಾಗ್ ಕಳ್ಳತನವಾಗಿದೆ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇರುವ ಬ್ಯಾಗ್ ನ್ನು ಸಚಿವರ ಕಚೇರಿಯಲ್ಲೇ ಮರೆತು ಬಿಟ್ಟುಹೋಗಿದ್ದರು. ಮರು ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿದೆ.

Home add -Advt

ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.


Related Articles

Back to top button