Latest

*ಪ್ರವೇಶ ಶುಲ್ಕ ನೀಡಿ ವಿಧಾನಸೌಧ ವೀಕ್ಷಣೆಗೆ ಅವಕಾಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿರುವ ವಿಧಾನಸೌಧದಲ್ಲಿ ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನಸೌಧ ನೋಡಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿದೆ.

ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ ವಿಧಾನಸೌಧವನ್ನ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ನಿರ್ಧಾರಿಸಿದೆ.

Home add -Advt

ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ವಿಧಾನಸೌಧದ ವೀಕ್ಷಣೆಗೆ ಅವಕಾಶ ಇರಲಿದೆ. ಇದಕ್ಕಾಗಿ “Guided Tour” ವ್ಯವಸ್ಥೆ ಕಲ್ಪಿಸಲಾಗುತ್ತಿದೆ. Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.ಪ್ರವಾಸಿಗರಿಗೆ ನಿಗದಿಪಡಿಸುವ ಪ್ರವೇಶ ದರ ಜನಸ್ನೇಹಿಯಾಗಿರುವಂತೆ ಚಿಂತನೆ ನಡೆಸಲಾಗುತ್ತಿದೆ.

ವಿಧಾನಸೌಧ ಕಟ್ಟಡ/ ಉದ್ಯಾನವನಗಳು/ಪ್ರತಿಮೆಗಳಿಗೆ ದಕ್ಕೆ ಉಂಟಾಗದಂತೆ ಎಚ್ಚರಿಕ ವಹಿಸಿ, ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸಬೇಕು ಎಂಬ ಪ್ರಸ್ತಾವನೆ ಸಲ್ಲಿಸಲಾಗಿದೆ.

Related Articles

Back to top button