ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
50 ವರ್ಷದ ನಂದಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ವಿಧಾನಸೌಧದ ಎರಡನೇ ಮಹಡಿಯ ಪ್ರವೇಶ ದ್ವಾರದಲ್ಲಿಯೇ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮದ್ಯಪಾನ ಮಾಡಿದ್ದ ನಂದಕುಮಾರ್ ಸ್ಯಾನಿಟೈಸರ್ ಕುಡಿದು ಬಳಿಕ 100ಕ್ಕೆ ಕರೆ ಮಾಡಿ ತಾನೇ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ವಿಧಾನಸೌಧ ಠಾಣೆ ಪೊಲೀಸರು ನಂದಕುಮಾರ್ ನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಂದಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ