
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಇಲ್ತಾಫ್, ಮೊಹಮ್ಮದ್ ನಾಶಿಪುಡಿ, ಮುನಾವರ್ ಬಂಧಿತ ಆರೋಪಿಗಳು. ಫೆ.೨೭ರಂದು ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸಂಭ್ರಮಾಚರಣೆ ವೇಳೆ ವಿಧಾನಸೌಧದ ಒಳಗೆ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಆರೋಪ ಕೇಳಿ ಬಂದಿತ್ತು. ವಿಧಾನಸೌಧ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.
ಇದೀಗ ದೆಹಲಿ ಮೂಲದ ಇಲ್ತಾಜ್, ಆರ್.ಟಿ.ನಗರದ ಮುನಾವರ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಎಂಬುವವರನ್ನು ಬಂಧಿಸಿದ್ದಾರೆ.