Kannada NewsKarnataka NewsLatestPolitics

*ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಎಫ್ ಎಸ್ ವರದಿಯಲ್ಲಿ ದೃಢ; ಸತ್ಯವನ್ನೇ ತಿರುಚಿದ ಕಾಂಗ್ರೆಸ್; ಬಿಜೆಪಿ ಆರೋಪ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ.

ಪಾಕ್ ಪರ ಘೋಷಣೆ ಕೂಗಿರುವುದು ಎಫ್ ಎಸ್ ವರದಿಯಲ್ಲಿ ಬಹಿರಂಗವಾಗಿದೆ. ಆದರೆ ಘೋಷಣೆಯನ್ನೇ ತಿರುಚುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

Home add -Advt

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ನಾಸೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಕಾಂಗ್ರೆಸ್ ಹುನ್ನಾರ ನಡೆಸಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಬಯಲಾಗಿದೆ ಎಂದು ಕಿಡಿಕಾರಿದೆ.

ಸತ್ಯವನ್ನೇ ತಿರುಚಿ ಸುಳ್ಳು ಸುದ್ದಿ ಮಾಡುವ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಈಗಲಾದರೂ ತಮ್ಮ ದೇಶದ್ರೋಹ ಕೃತ್ಯವನ್ನು ಒಪ್ಪಿಕೊಂಡು ವಿಧನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ.

Related Articles

Back to top button