Kannada NewsKarnataka NewsLatest

*ಸಭೆ ಮುಗಿದ ಬಳಿಕವೂ ದಕ್ಷಿಣ ದ್ವಾರದ ಮೂಲಕವೇ ಹೊರಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಸಿದ್ದಾರೆ.

ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.

ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button