Kannada NewsKarnataka NewsLatestPolitics

*ವಿಧಾನಸೌಧ, ವಿಕಾಸಸೌಧದಲ್ಲಿ ಅರಿಷಿನ, ಕುಂಕುಮ ನಿಷೇಧ; ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧ, ವಿಕಾಸಸೌಧಗಳಲ್ಲಿ ಅರಿಷಿನ, ಕುಂಕುಮ ನಿಷೇಧಿಸಿರುವ ಸರ್ಕಾರದ ಕ್ರಮದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button