Karnataka NewsLatest

*ವಿಧಾನಸೌಧ, ವಿಕಾಸಸೌಧದಲ್ಲೇ ಮಹಿಳೆ ಮೇಲೆ ಅತ್ಯಾಚಾರ*

ಬಿಜೆಪಿ ಶಾಸಕನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ

Home add -Advt

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ, ವಿಕಾಸಸೌಧದಲ್ಲಿಯೂ ಬಿಜೆಪಿ ಶಾಸಕರೊಬ್ಬರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪೊಲೀಸರ ಮುಂದೆ ವಿಚಾರಣೆ ವೇಳೆ ಸಂತ್ರಸ್ತ ಮಹಿಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿಧಾನಸೌಧದಲ್ಲಿಯೂ ಶಾಸಕರು ಇಂತಹ ಹೇಯ ಕೃತ್ಯವೆಸಗಿದ್ದಾರೆ ಎಂಬುದು ರಾಜ್ಯದ ಜನತೆಯನ್ನೇ ಆಘಾತಕ್ಕೀಡುಮಾಡಿದೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದು, ವಿಧಾನಸೌಧ, ವಿಕಾಸಸೌಧದಲ್ಲಿಯೂ ನನ್ನ ಮೇಲೆ ಮುನಿರತ್ನ ಅತ್ಯಾಚರವೆಸಗಿದ್ದಾನೆ ಎಂದು ವಿಚಾರಣೆ ವೇಳೆ ಮಹಿಳೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದು, ಎಸ್ಐಟಿ ತನಿಖೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಪೊಲೀಸರು ಸಂತ್ರಸ್ತೆ ವಿಚಾರಣೆ ನಡೆಸಿದ ವೇಳೆ ಸಂತ್ರಸ್ತೆ ವಿಧಾನಸೌಧ, ವಿಕಾಸಸೌಧದಲ್ಲಿಯೂ ತನ್ನ ಮೇಲೆ ಮುನಿರತ್ನ ಅತ್ಯಾಚಾರವೆಸಗಿದ್ದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

Related Articles

Back to top button