ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ವಿದ್ಯಾನಿಧಿ ಯೋಜನೆಗೆ ಯಾರೂ ಅರ್ಜಿ ಸಲ್ಲಿಸಲಿಸುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆಯಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಸಿ.ಪಾಟೀಲ್, ರಾಜ್ಯ ಸರ್ಕಾರದ ಬಳಿ ಇರುವ ರೈತರ ದಾಖಲೆಗಳ ಆಧಾರದಲ್ಲಿಯೇ ಅರ್ಹತೆಯ ಫಲಾನುಭವಿಗಳನ್ನು ಆಯ್ಕೆ ಮಾಡಿ ರೈತರ ಮಕ್ಕಳಿಗೆ ವಿದ್ಯಾನಿಧಿ ಶಿಷ್ಯ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಬಳಿ ರೈತರ ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಎಂಬ ಮಾಹಿತಿ ಇದೆ. ವಿದ್ಯಾನಿಧಿ ಯೋಜನೆಯ ಅರ್ಹತೆ ಪರಿಗಣಿಸಲು ಈಗಿರುವ ದಾಖಲೆಗಳನ್ನೇ ಬಳಸಿಕೊಂಡು ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಕೃಷಿ ಇಲಾಖೆ ನಿರ್ಧರಿಸಿದೆ.
ಪಲ್ಟಿಯಾದ ಬಸ್; 30 ಪ್ರಯಾಣಿಕರಿಗೆ ಗಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ