ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರೊನಾ ಸಂದರ್ಭದಲ್ಲಿ ಮಕ್ಕಳು ಶಿಕ್ಷಣ ವಂಚಿತರಾಗಬಾರದು ಎಂದು ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೆ ತಂದಿತ್ತು. ಆದರೆ ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಗೆ ಹೋದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದು, 150 ಶಿಕ್ಷಕರು ಕೊರೊನಾಗೆ ಬಲಿಯಾಗಿದ್ದರು. ಶಿಕ್ಷಕರ ಪ್ರಾಣಕ್ಕೆ ಮುಳುವಾಗಿರುವ ಈ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ವಿದ್ಯಾಗಮ ಯೋಜನೆ ಸ್ಥಗಿತಗಳಿಸಲು ಆಗ್ರಹಗಳು ಕೇಳಿಬಂದಿದ್ದವು.
ವಿದ್ಯಾಗಮ ಯೋಜನೆಯಲ್ಲಿ ತೊಡಗಿದ್ದ ಶಿಕ್ಷಕರು ಕೊರೋನಾ ಸೋಂಕಿಗೆ ತುತ್ತಾಗಿ ಸಾವಿಗೀಡಾಗುತ್ತಿರುವ ಕುರಿತು ಪ್ರಗತಿವಾಹಿನಿ ನಿನ್ನೆಯೇ ವರದಿ ಪ್ರಕಟಿಸಿತ್ತು.
ಒತ್ತಡ ಹೆಚ್ಚಿದ ಬೆನ್ನಲ್ಲೇ ಎಚ್ಚೆತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇದೀಗ ಯೋಜನೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಈ ಯೋಜನೆಯಿಂದಾಗಿ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಜಿಲ್ಲಾವಾರು ವರದಿ ಬರುವವರೆಗೂ ಯೋಜನೆ ಸ್ಥಗಿತಗೊಳಿಸಲು ಸೂಚಿಸಿದ್ದಾರೆ.
ವಿದ್ಯಾಗಮ ಎಡವಟ್ಟು ಸರಿಪಡಿಸದಿದ್ದರೆ ಅಹೋರಾತ್ರಿ ಧರಣಿ
ವಿದ್ಯಾಗಮ ಯೋಜನೆ; ಕೊರೊನಾಗೆ ಬಲಿಯಾದ ಶಿಕ್ಷಕರು ಎಷ್ಟು ಗೊತ್ತೇ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ