Latest

ವಿದ್ಯಾವಾಚಸ್ಪತಿ, ಪದ್ಮಶ್ರೀ ಪುರಸ್ಕೃತ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಿರಿಯ ವಿದ್ವಾಂಸ, ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ತಿಂಗಳಿಂದ ಬನ್ನಂಜೆ ಗೋವಿಂದಾಚಾರ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ವಿಧಿವಶರಾಗಿದ್ದಾರೆ.

ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತರಾಗಿದ್ದ ಬನ್ನಂಜೆ ಅವರು ಅಧ್ಯಾತ್ಮ ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ತ್ರಿವಿಕ್ರಮಾಚಾರ್ಯದಾಸರ ’ಆನ೦ದಮಾಲಾ’, ತ್ರಿವಿಕ್ರಮ ಪ೦ಡಿತರ ’ವಾಯುಸ್ತುತಿ’, ’ವಿಷ್ಣುಸ್ತುತಿ’ ಇತ್ಯಾದಿ ಕೃತಿಗಳಿಗೆ ಟಿಪ್ಪಣಿಯನ್ನು ಬರೆದಿದ್ದಾರೆ. ಆರು ಉಪನಿಷತ್ತುಗಳಿಗೆ ಟೀಕೆ, ಮಧ್ವಾಚಾರ್ಯರ ಮಹಾಭಾರತದ ತಾತ್ಪರ್ಯದ ಟೀಕಾ ಕೃತಿಯಾದ ’ಯಮಕ ಭಾರತ’ ಕೃತಿಗೆ ಟಿಪ್ಪಣಿ, ’ಭಾಗವತ ತಾತ್ಪರ್ಯ’ ಕೃತಿ ಗೆ ಟಿಪ್ಪಣಿ ಬರೆದಿದ್ದಾರೆ. ಅಲ್ಲದೇ ಅನೇಕ ಸಂಸ್ಕೃತ ಕೃತಿಗಳಾದ ಬಾಣಭಟ್ಟನ ಕಾದಂಬರಿ, ಕಾಳೀದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ ಬನ್ನಂಜೆ ಗೋವಿಂದಾಚಾರ್ಯ, ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಮಕಾಲೀನರಾಗಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button