
ಪ್ರಗತಿವಾಹಿನಿ ಸುದ್ದಿ: ತಮಿಳು ನಟ, ರಾಜಕೀಯ ನಾಯಕ ವಿಜಯ್ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ನಟ ವಿಜಯ್ ಪರಿಹಾರ ಘೋಷಿಸಿದ್ದಾರೆ.
ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ನಟ ವಿಜಯ್, ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಿರುವ ಕುಟುಂಬದವರಿಗೆ ತಲಾ 20 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಕರೂರಿನಲ್ಲಿ ರ್ಯಾಲಿಯ ವೇಓಳೆ ಸಂಭವಿಸಿದ ಕಾಲ್ತುಳಿತ ದುರಂತದಿಂದ ನನ್ನ ಹೃದ ಛಿದ್ರವಾಗಿದೆ. ಮನಸ್ಸಿನ ತುಂಬೆಲ್ಲ ದು:ಖ ಆವರಿಸಿದೆ. ಘಟನೆಯಿಂದಾಗಿ ನಾನು ಅಸಹನೀಯವಾದ ನೋವು ಹಾಗೂ ದು:ಖದಲ್ಲಿದ್ದೇನೆ. ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವ ನನ್ನ ಸಹೋದರ, ಸಹೋದರಿಯರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.