*ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ನಟ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳು ನಟ, ರಾಜಕೀಯ ನಾಯಕ ವಿಜಯ್ ಅವರ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕರೂರಿನಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತ ದುರಂತದಲ್ಲಿ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ನಟ ವಿಜಯ್ ಪರಿಹಾರ ಘೋಷಿಸಿದ್ದಾರೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ನಟ ವಿಜಯ್, ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಿರುವ ಕುಟುಂಬದವರಿಗೆ ತಲಾ 20 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. … Continue reading *ಕರೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ನಟ ವಿಜಯ್*