Latest

ವಿಜಯ್ ಮಲ್ಯ ವಿರುದ್ಧ ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ವಿರುದ್ಧದ ಆರೋಪ ಸಾಬೀತಾಗಿದ್ದು, ಶಿಕ್ಷೆ ಪ್ರಮಾಣವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಕಿಂಗ್‌ಫಿಷರ್ ಏರ್‌ಲೈನ್ಸ್‌ಗೆ ಸಂಬಂಧಿಸಿದ 9,000 ಕೋಟಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲದ ಪ್ರಕರಣದಲ್ಲಿ ವಿಜಯ್ ಮಲ್ಯ ಆರೋಪಿಯಾಗಿದ್ದು, ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಸಾಬೀತಾಗಿದೆ. ಎಸ್ ಬಿಐಗೆ ಸಂಬಂಧಿಸಿದಂತೆ ಆಸ್ತಿವಿವರ ಬಹಿರಂಗಗೊಳಿಸದ ಹಿನ್ನೆಲೆಯಲ್ಲಿ ಮಲ್ಯ ದೋಷಿ ಎಂದು ಸುಪ್ರೀಂ ಕೋರ್ಟ್ ನ್ಯಾ.ಯು.ಯು.ಲಲಿತ್ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿದೆ.

ವಿಜಯ್ ಮಲ್ಯಬ್ಯಾಂಕ್ ಗಳಿಗೆ 9000 ಕೋಟಿ ರೂಗಳನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿದ್ದಲ್ಲದೇ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣವನ್ನು ವರ್ಗಾಯಿಸಿದ್ದಾರೆ. ಆಸ್ತಿಯ ಸಂಪೂರ್ಣ ವಿವರ ಬಹಿರಂಗ ಪಡಿಸುವಂತೆ ನ್ಯಾಯಾಲಯ ಆದೇಶಿಸಿದ್ದರೂ ಬಹಿರಂಗ ಪಡಿಸಿರಲಿಲ್ಲ. ಅಲ್ಲದೇ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದ್ದರೂ ಹಾಜರಾಗದೇ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದಾರಲ್ಲದೇ ತಪ್ಪಿತಸ್ಥರೆಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರನಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಪಂಚರಾಜ್ಯ ಚುನಾವಣೆ: ಕೆಲ ಕುತೂಹಲಕಾರಿ ಸಂಗತಿಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button