Latest

ಉದ್ಯಮಿ ವಿಜಯ್ ಮಲ್ಯಗೆ ಜೈಲು ಶಿಕ್ಷೆ ಪ್ರಕಟಿಸಿದ ಸುಪ್ರೀಂ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಜೈಲು ಶಿಕ್ಷೆ ಪ್ರಕಟಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೋರ್ಟ್ ಆದೇಶ ಉಲ್ಲಂಘಿಸಿ ಮಕ್ಕಳಿಗೆ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ವಿಜಯ್ ಮಲ್ಯ ತಪ್ಪಿತಸ್ಥ ಎಂದು ಈ ಹಿಂದೆಯೇ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದರೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಇಂದು ಸುಪ್ರೀಂ ಕೋರ್ಟ್ ನ ವಿಭಾಗೀಯ ನ್ಯಾಯಪೀಠ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ಹಾಗೂ 2000 ರೂಪಾಯಿ ದಂದ ವಿಧಿಸಿ ತೀರ್ಪು ಪ್ರಕಟಿಸಿದೆ.

ಕೋರ್ಟ್ ಆದೇಶ ಉಲ್ಲಂಘಿಸಿ 2017ರಲ್ಲಿ ವಿಜಯ್ ಮಲ್ಯ ತಮ್ಮ ಮಕ್ಕಳಿಗೆ $40 ಮಿಲಿಯನ್ ಹಣ ವರ್ಗಾವಣೆ ಮಾಡಿದ್ದರು. ಈ ಬಗ್ಗೆ ಪ್ರಕರಣದ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಜಯ್ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣ ಸಂಬಂಧ ವಿಜಯ್ ಮಲ್ಯಗೆ 4 ತಿಂಗಳ ಸೆರೆವಾಸ ಶಿಕ್ಷೆಯಾಗಿದೆ.

AIADMK ಮುಖಂಡರ ಮಾರಾಮಾರಿ; ಕಚೇರಿ ಎದುರು ರಸ್ತೆಯಲ್ಲೇ ಹೊಡೆದಾಡಿಕೊಂಡ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button