VTU Add
Beereshwara 36
LaxmiTai 5

*ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು

Anvekar 3

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃಧಯಾಘಾತದಿಂದ ನಿದನರಾಗಿದ್ದಾರೆ.

ವಿದೇಶ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾಗೆ ಏಕಾಏಕಿ ಹೃದಯಾಘಾತವಾಗಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Cancer Hospital 2
Emergency Service

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆಯೇ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬ್ಯಾಂಕಾಕ್ ನಲ್ಲಿದ್ದಾಗ ನಿನ್ನೆಯೇ ಸ್ಪಂದನಾಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಕುಟುಂಬ ಸದಸ್ಯರೆಲ್ಲರೂ ಮಂಗಳೂರಿನಿಂದ ತಡರಾತ್ರಿ ಬ್ಯಾಂಕಾಕ್ ಗೆ ತೆರಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿ ಸ್ಪಂದನಾ, ಕಿಸ್ಮತ್ ಎಂಬ ಸಿನಿಮಾವನ್ನೂ ನಿರ್ಮಾಣ ಮಾಡಿದ್ದರು. ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹಠಾತ್ ಸಾವು ಇಡೀ ಕನ್ನಡ ಚಿತ್ರರಂಗ ಮಾತ್ರವಲ್ಲ, ಎಲ್ಲರೂ ಆಘಾತವನ್ನುಂಟು ಮಾಡಿದೆ.

Bottom Add3
Bottom Ad 2