ಪ್ರಗತಿವಾಹಿನಿ ಸುದ್ದಿ, ಮುಧೋಳ : ನಿರಾಣಿ ಉದ್ಯಮ ಸಮೂಹದ ವಿಜಯ ಇಂಟರ್‌ನ್ಯಾಶನಲ್ ಸ್ಕೂಲ್ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಎಲ್ಲ ೩೩ ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ನೂರಕ್ಕೆ ನೂರು ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಮಲಾ ಮುರುಗೇಶ ನಿರಾಣಿ ತಿಳಿಸಿದ್ದಾರೆ.
ವಿಜಯ ಇಂಟರ್‌ನ್ಯಾಶನಲ್ ಸ್ಕೂಲ್ ಸತತ ೫ ವರ್ಷ ನೂರಕ್ಕೆ ನೂರು ಫಲಿತಾಂಶ ಪಡೆದು ದಾಖಲೆ ಸ್ಥಾಪಿಸಿದೆ. ಈ ವರ್ಷ ೨೦ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಲಕ್ಷ್ಮೀ ಯಾದವ(೯೦%) ವರುಣ ಗಣಿ (೮೬%) ಮತ್ತು ಶಿಲ್ಪಾ ಬಡಿಗುಡದಾರ (೮೫%) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶಾಲೆಯ ಉತ್ತಮ ಫಲಿತಾಂಶದ ಬಗ್ಗೆ ಸಂಸ್ಥಾಪಕ ಅಧ್ಯಕ್ಷ ಮುರುಗೇಶ ನಿರಾಣಿ ಸಂತೋಷ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ