Film & Entertainment

*ದರ್ಶನ್ ಬಿಡುಗಡೆಗಾಗಿ ಕೊಲ್ಲೂರು ಮೂಕಾಂಬಿಕಾ ಮೊರೆ ಹೋದ ಪತ್ನಿ ವಿಜಯಲಕ್ಷ್ಮೀ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದು, ವಿಶೇಷ ಹೋಮ, ಪೂಜೆಗಳನ್ನು ಮಾಡಿಸುತ್ತಿದ್ದಾರೆ. ಇದೀಗ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಿ ಮೊರೆ ಹೋಗಿದ್ದಾರೆ.

Home add -Advt

ಪತಿ ದರ್ಶನ್ ಸಂಕಷ್ಟ ನಿವಾರಣೆಗೆ ಕುಟುಂಬದಲ್ಲಿನ ತೊಂದರೆಗಳ ನಿವಾರಣೆಗಾಗಿ ಪತ್ನಿ ವಿಜಯಲಕ್ಷ್ಮೀ ಇಂದು ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಲ್ಲದೇ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ನವಚಂಡಿಕಾ ಹೋಮ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಮಳೆಯ ನಡುವೆಯೂ ದೇವಾಲಯಕ್ಕೆ ಭೇಟಿ ನೀಡಿರುವ ವಿಜಯಲಕ್ಷ್ಮೀ ಪತಿ ಬಿಡುಗಡೆಗಾಗಿ ಹಾಗೂ ಕುಟುಂಬದ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ.

Related Articles

Back to top button