Film & EntertainmentKannada NewsKarnataka NewsLatest

*ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದೆ.

ವಿಜಯಲಕ್ಷ್ಮೀ ನಿವಾಸ ಹೊಸಕೆರೆಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ ಮೆಂಟ್ ನಲ್ಲಿರುವ ಮನೆಯಲ್ಲಿ 3 ಲಕ್ಷ ನಗದು ಕಳ್ಳತನಾಗಿದೆ. ಮನೆಯ ಬೆಡ್ ರೂಮ್ ನಲ್ಲಿಟ್ಟಿದ್ದ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ.

ಈ ಬಗ್ಗೆ ಮ್ಯಾನೇಜರ್ ನಾಗರಾಜ್ ಮೂಲಕ ವಿಜಯಲಕ್ಷ್ಮೀ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button