Film & EntertainmentKannada NewsKarnataka NewsLatest
*ದರ್ಶನ್ ಪತ್ನಿ ವಿಜಯಲಕ್ಷ್ಮೀ ಗೆ ಅಶ್ಲೀಲ ಕಮೆಂಟ್: 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದಲ್ಲಿ ಈವರೆಗೆ ಬೆಂಗಳೂರು ಸೈಬರ್ ಪೊಲೀಸರು 6 ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿಗಳಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಗಳು, ಬ್ಯಾಂಕ್ ಮ್ಯಾನೇಜರ್ ಗಳು ಸೇರಿ ಆರು ಜನರು ಇದ್ದು, ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಬಂಧಿತರ ವಿರುದ್ಧ 60 ದಿನಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಬೇಕಿತ್ತು. ಈ ಹಿನ್ನೆಲೆಯಲ್ಲಿ 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಅಶ್ಲೀಲ ಕಮೆಂಟ್ ಕಳುಹಿಸಿರುವ ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಕೋರ್ಟ್ ಗೆ ಸಲ್ಲಿಸಿಸ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.



