
ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಮಗುವಿನ ಮೇಲೆ ಕಾರು ಹರಿದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಆಸ್ಪತ್ರೆಯಲ್ಲಿ ನಡೆದಿದೆ.
ನಾಲ್ಕು ವರ್ಷದ ಹನುಮಂತ ಮೃತ ಬಾಲಕ. ಸರ್ಕಾರಿ ಆಸ್ಪತ್ರೆಯ ನೌಕರ ರವಿ ಎಂಬಾತ ಕಾರು ಚಲಾಯಿಸಿಕೊಂಡು ಬರುತ್ತಿದ್ದ. ಆಸ್ಪತ್ರೆ ಆವರಣದಲ್ಲಿ ನಿಂತಿದ್ದ ಗರ್ಭಿಣಿ ಹಾಗೂ ಮಗುವಿನ ಮೇಲೆ ಕಾರು ಹಸಿದ್ದಾನೆ. ಸ್ಥಳದಲ್ಲೇ ಮಗು ಸಾವನ್ನಪ್ಪಿದೆ. ಗರ್ಭಿಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಹನುಮಂತ ಕಂಚೂರು ಗ್ರಾಮದ ಕೋಟೆಪ್ಪ ಹಾಗೂ ರೂಪಾ ದಂಪತಿ ಮಗುವಾಗಿದೆ. ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಸ್ಫೋಟ; 6 ಸಿಆರ್ ಪಿ ಎಫ್ ಯೋಧರಿಗೆ ಗಾಯ