
ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಅಯ್ಯಪ್ಪ ಮಾಲಾಧಾರಿಗಳು ತೆರ್ಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನಲ್ಲಿ ನಡೆದಿದೆ.
ಗದಗದಿಂದ ಕೇರಳದ ಅಯ್ಯಪ್ಪ ದೇವಸ್ಥಾನಕ್ಕೆ ಅಯ್ಯಪ್ಪ ಮಾಲಾಧಾರಿಗಳು ಕಾರಿನಲ್ಲಿ ತೆರಳುತ್ತಿದ್ದರು. ಕೂಡ್ಲಗಿಯ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇಬ್ಬರು ಮಾಲಾಧಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿನ್ನುಪಾಟೀಲ (26), ಯುವರಾಜ(28) ಮೃತರು.ಕಾರಿನಲ್ಲಿದ್ದ ಇನ್ನೂ ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ