ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ಎರಡು ಜಿಲ್ಲೆಯನ್ನಾಗಿ ಇಬ್ಭಾಗ ಮಾಡಲಾಗಿದ್ದು, ವಿಜಯನಗರ ನೂತನ ಜಿಲ್ಲೆಯಾಗಿ ಅಸ್ತಿತ್ವಕ್ಕೆ ಬಂದಿದೆ. ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆ ಅಧಿಕೃತವಾಗಿ ಸಮ್ಮತಿ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಹೊಸ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಕೂಡ್ಲಗಿ, ಹರಪಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.
ಇನ್ನು ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಹಾಗೂ ಕುರಗೋಡು ತಾಲೂಕುಗಳು ಮುಂದುವರೆಯಲಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ