ಪ್ರಗತಿವಾಹಿನಿ ಸುದ್ದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಘೋಷವಾಕ್ಯವನ್ನೇ ತಿದ್ದಿ ಬದಲಾವಣೆ ಮಾಡಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.
ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಘಾಳಪೂಜೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೇಲ್ ನ ಪ್ರವೇಶ ದ್ವಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನು ಬದಲಾವಣೆ ಮಾಡಿ ಬರೆಯಲಾಗಿದೆ.
’ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ’ ಎಂಬ ಘೋಷವಾಕ್ಯವನ್ನು ’ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾವಣೆ ಮಾಡಲಾಗಿದೆ. ವಸತಿ ಶಾಲೆಯ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ