Kannada NewsKarnataka NewsLatest

*ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ, ಫೈರಿಂಗ್: 14 ಜನರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆಯ ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಫೈರಿಂಗ್ ಮಾಡಿದ ಪ್ರಕರಣದಲ್ಲಿ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ವಡ್ಡರ್ ಹಾಗೂ ಪೂಜಾರಿ ಗುಂಪುಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ರಾಮ ಅಂಕಲಗಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಇದರಿಂದ ಬಾಲಕಿಯ ಕಾಲಿಗೆ ಗುಂಡೇಟು ತಗುಲಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇದೀಗ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಎರಡೂ ಗುಂಪುಗಳ 14 ಜನರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button