Karnataka News

*ಮಳೆ ಅಬ್ಬರಕ್ಕೆ ಕುಸಿದು ಬಿದ್ದ ಮನೆ ಮೇಲ್ಛಾವಣಿ: ಮಹಿಳೆ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಧಾರಾಕಾರವಾಗಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಈ ಘಟನೆ ನಡೆದಿದೆ. ಮನೆಯ ಅಡಿ ಸಿಲುಗಿ ಮಹಿಳೆ ಹೂತು ಹೋಗಿದ್ದಾರೆ. ಸಂಗೀತಾ ಬಾಳಾಸಾಹೇಬ್ ಪಾಟೀಲ್ (30) ಮೃತ ಮಹಿಳೆ.

ರಾತ್ರಿಯಿಡಿ ಸುರುದ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯ ಪತಿ ಹಾಗೂ ಮಕ್ಕಳು ಮನೆಯಿಂದ ಹೊರಬಂದು ಪಾರಾಗಿದ್ದಾರೆ. ಮಣ್ಣಿನಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಅವರ ಮೃತದೇಹವನ್ನು ಸ್ಥಳೀಯರು ಹೊರತೆಗೆದಿದ್ದಾರೆ.

ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt


Related Articles

Back to top button