Kannada NewsKarnataka NewsLatest

*ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೂವರು ಮಕ್ಕಳನ್ನು ಬಾವಿಗೆ ತಳ್ಳಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಾಜಶ್ರೀ ಶಂಕ್ರಮ್ಮ ಹಳ್ಳೂರ (28) ಎಂಬ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ರಾಜಶ್ರೀ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿದ್ದು, ಕೆಲಸದ ಕಾರಣಕ್ಕೆ ಹೊರಗೆ ಹೋಗಿದ್ದರು. ಪತಿ ಊರಿನಲ್ಲಿ ಇರದ ವೇಳೆ ರಾಜಶ್ರೀ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button