Latest

ವಿಜಯಪುರದಲ್ಲಿ 37 ಜನ ಪೊಲೀಸ್ ಸಿಬ್ಬಂದಿ ಕ್ವಾರಟೈನ್

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಾಖಿಗಳಿಗೆ ಕೊರೊನಾ ಭೀತಿ ಎದುರಾಗಿದೆ. ಪೊಲೀಸ್ ಕಾನಸ್ಟೇಬಲ್​​ ಓರ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಈತನ ಸಂಪರ್ಕಕ್ಕೆ ಬಂದಿರುವ 37 ಜನ ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಓರ್ವರಲ್ಲಿ ವೈರಸ್ ದೃಢಪಟ್ಟಿದೆ. ಇವರು ವಿಜಯಪುರ ನಗರದ ಕಂಟೇನ್ಮೆಂಟ್ ಏರಿಯಾದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಈಗಾಗಲೇ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

ಅಲ್ಲದೇ, ಈ ಕಾನ್ಸ್​ಟೇಬಲ್ ಸಂಪರ್ಕಕ್ಕೆ ಬಂದಿದ್ದ ಇತರ ಪೊಲೀಸ್ ಠಾಣೆಯ 4 ಜನ ಸಿಬ್ಬಂದಿಯನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ. ಈಗ ಜಲನಗರ ಪೊಲೀಸ್ ಠಾಣೆಯನ್ನು ಸೀಲ್​​ಡೌನ್​​ ಮಾಡಿದ್ದರಿಂದ ಈ ಠಾಣೆಯ ಪಕ್ಕದಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನಕಕ್ಕೆ ಜಲನಗರ ಪೊಲೀಸ್ ಠಾಣೆಯನ್ನು ತಾತ್ಕಾಲಿಕವಾಗಿ ಶಿಫ್ಟ್ ಮಾಡಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ 1500 ಜನ ಸಿವಿಲ್ ಮತ್ತು 300 ಜನ ಮೀಸಲು ಪಡೆಯ ಸಿಬ್ಬಂದಿಯಿದ್ದು, ಈಗಾಗಲೇ ವಿಜಯಪುರ ನಗರ ಮತ್ತು ಇಂಡಿ ಉಪವಿಭಾಗದ 500 ಜನ ಪೊಲೀಸ್ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button