ಪ್ರಗತಿವಾಹಿನಿ ಸುದ್ದಿ: ಹಲವು ಜಿಲ್ಲೆಗಳಲ್ಲಿ ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರ ಹಾಗೂ ವಕ್ಫ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿರುವ ನಡುವೆ 43 ಪ್ರವಾಸಿ ತಾಣಗಳಿಗೂ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ವಿಜಯಪುರ ಜಿಲ್ಲೆಯಲ್ಲಿ ವಿವಿಧ ಸ್ಮಾರಕ, ಪ್ರವಾಸಿ ತಾಣಗಳು ಸೇರಿದಂತೆ 43 ಪ್ರವಾಸಿ ತಾಣಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಲಾಗಿದೆ. ಇದನ್ನು ಸಂಸದ ರಮೇಶ್ ಜಿಗಜಿಣಗಿ ತೀವ್ರವಾಗಿ ಖಂಡಿಸಿದ್ದಾರೆ.
ಪ್ರವಾಸಿ ತಾಣಗಳು, ಸ್ಮಾರಕಗಳಿಗೆ ವಕ್ಫ್ ಆಸ್ತಿ ಎಂದು ನೀಡಿರುವ ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ರೈತರಿಗೆ ನೀಡಲಾಗಿದ್ದ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದೀಗ ಪ್ರವಾಸಿ ತಾಣ ಹಾಗೂ ಸ್ಮಾರಕಗಳಿಗೆ ನೀಡಿರುವ ನೋಟಿಸ್ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ