CrimeKannada NewsKarnataka NewsLatest
*ಭೂತನಾಳ ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ 6 ಜನರ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ಇಲ್ಲಿನ ಐಟಿಹಾಸಿಕ ಭೂತನಾಳ ಕೆರೆಯಲ್ಲಿ ೬ ಶವಗಳು ಪತ್ತೆಯಾಗಿವೆ.
ಇಂದು ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಜನರು ಕೆರೆಯಲ್ಲಿ ತೇಲುತ್ತಿದ್ದ ಶವಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಮೀಪಕ್ಕೆ ಹೋಗಿ ನೋಡಿದಾಗ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ ಒಟ್ಟು 6 ಜನರ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಕೆರೆಯಲ್ಲಿ ಆರು ಜನರ ಶವ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾಸ್ಥಳಕ್ಕೆ ವಿಜಯಪುರ ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




