*ಬಸ್-ಬೈಕ್ ಭೀಕರ ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಸವಾರ ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸಜೀವದಹನವಾಗಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲುಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆನಡೆದಿದೆ. ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಬೈಕ್ ಸವಾರ ಸಜೀವದಹನವಾಗಿದ್ದಾರೆ. ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಸುಟ್ಟು ಕರಕಲಾಗಿದೆ. … Continue reading *ಬಸ್-ಬೈಕ್ ಭೀಕರ ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಸವಾರ ಸಜೀವದಹನ*
Copy and paste this URL into your WordPress site to embed
Copy and paste this code into your site to embed