Latest

ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಮಗು ಸೇರಿ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕೆಟ್ಟುನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟಿ ನಾಲ್ವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿಹೊಡೆದಿದೆ. ಕಾರಿನಲ್ಲಿದ್ದ ವಿಜಯಪುರ ಮೂಲದ ಮಹಿಳೆ, ಮಗು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಲಾರಿ ರಿಪೇರಿ ಮಾಡುತ್ತಿದ್ದ ಚಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಕೂಡ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಯುವತಿಗೆ ಡ್ರಗ್ಸ್ ನೀಡಿ ಗ್ಯಾಂಗ್ ರೇಪ್; ಮತ್ತೊಂದು ಪೈಶಾಚಿಕ ಕೃತ್ಯ ಬಯಲು

Related Articles

Back to top button